ಇಂದು - ಅಂದು
*ಅಂದಿನ ಮನೆಗಳು🏡 ಇಂದಿನಂತಿರಲಿಲ್ಲ🏨* *ಈಗಿನ ಮನೆಗಳೇಕೋ ಮೊದಲಿದ್ದಂತಿಲ್ಲ...!* *ಮನೆಸುತ್ತ ಕಾಂಪೌಂಡು, ಗೇಟು ಭದ್ರ, ಒಳಗಿರುವ ಮನಸುಗಳೇ ಏಕೋ ಛಿದ್ರ ಛಿದ್ರ...!* *ಬಂಧುಗಳೇ ಬಾರದ, ಸ್ನೇಹಿತರೂ ಸೇರದ ಮನೆಗಳ ಮುಂದೆ ಸದಾ ಕಾವಲುಗಾರ...!* *ಇಂದು ಮನೆಯಲ್ಲಿ 🏡ಅನ್ನವೇ ಬೇಯುತ್ತಿಲ್ಲ, ಮನಸುಗಳು ಮಾತ್ರ ಕುದಿಯುತ್ತಿವೆಯಲ್ಲ🥵😭...!* *ಅಡುಗೆ ಮನೆ, ಸದಾ ಖಾಲಿ ಖಾಲಿ ಇರುತ್ತೆ. ಫೋನಿಂದ ಕೂತಲ್ಲಿಗೆ ಊಟ ತಿಂಡಿ ಬರುತ್ತೆ...!* *ಮನೆಗಳಾಗುತ್ತಿವೆ ಮಹಡಿಗಳಿಂದ ಎತ್ತರ... ಎತ್ತರ... ಮನಸ್ಸುಗಳೇ ಆಗುತ್ತಿಲ್ಲ ಹತ್ತಿರ...ಹತ್ತಿರ...! ಸಂತೋಷ ಏನೆಂಬುದಕ್ಕೆ ಸಿಗುತ್ತಿಲ್ಲ ಉತ್ತರ...!* *ಅಂದು...ಬಿಸಿಲು, ಮಳೆ, ಚಳಿಗೆ ಮೈ ಒಗ್ಗಿತ್ತು, ಮನೆ ತಣ್ಣಗಿತ್ತು. ಒಲೆ ಹೊಗೆಯಾಡುತ್ತಿತ್ತು. ಬಿಸಿನೀರ ಹಂಡೆ ಹಬೆಯಾಡುತ್ತಿತ್ತು...!* *ಕಣಜದ ತುಂಬಾ... ದವಸ ಧಾನ್ಯ ತುಂಬಿತ್ತು. ಬಂಧುಬಳಗದ ನಡುವೆ ಅನುಬಂಧವಿತ್ತು* *ಎಲ್ಲರೊಟ್ಟಿಗೆ ಮನೆಯೂ ನಗೆಯಾಡುತಿತ್ತು...!* *ಮನೆ ಚಿಕ್ಕದಾದ್ರೂ, ಮನಸು ಚೊಕ್ಕವಾಗಿತ್ತು...!* *ಅಂದು ನನ್ನಜ್ಜ ಕಟ್ಟಿದ ಮನೆಯಲ್ಲಿ...ನಲಿವಿತ್ತು, ಒಲವಿತ್ತು, ಸಂತಸದ ಸೆಲೆಯಿತ್ತು...!* *ಮುಖ್ಯ ಬಾಗಿಲು* *ಚಿಕ್ಕದಿತ್ತು,* *ತಲೆಬಾಗಬೇಕಿತ್ತು*. *ಮಣ್ಣಿನ ಗೋಡೆ, ಸಾರಿಸಿದ ನೆಲವಿತ್ತು* *ಮಾಡು ಚಿಕ್ಕದಿತ್ತು, ಬದುಕು ದೊಡ್ಡದಿತ್ತು. ನೋವುಗಳಿದ್ದರೂ ಬದುಕಿಗೆ ಬೆಲೆಯಿತ್ತು.ಚಾಪೆಯಲಿ ಕಣ್
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ