ಇಂದು - ಅಂದು
*ಅಂದಿನ ಮನೆಗಳು🏡 ಇಂದಿನಂತಿರಲಿಲ್ಲ🏨*
*ಈಗಿನ ಮನೆಗಳೇಕೋ ಮೊದಲಿದ್ದಂತಿಲ್ಲ...!*
*ಮನೆಸುತ್ತ ಕಾಂಪೌಂಡು, ಗೇಟು ಭದ್ರ, ಒಳಗಿರುವ ಮನಸುಗಳೇ ಏಕೋ ಛಿದ್ರ ಛಿದ್ರ...!*
*ಬಂಧುಗಳೇ ಬಾರದ, ಸ್ನೇಹಿತರೂ ಸೇರದ ಮನೆಗಳ ಮುಂದೆ ಸದಾ ಕಾವಲುಗಾರ...!*
*ಇಂದು ಮನೆಯಲ್ಲಿ 🏡ಅನ್ನವೇ ಬೇಯುತ್ತಿಲ್ಲ, ಮನಸುಗಳು ಮಾತ್ರ ಕುದಿಯುತ್ತಿವೆಯಲ್ಲ🥵😭...!*
*ಅಡುಗೆ ಮನೆ, ಸದಾ ಖಾಲಿ ಖಾಲಿ ಇರುತ್ತೆ. ಫೋನಿಂದ ಕೂತಲ್ಲಿಗೆ ಊಟ ತಿಂಡಿ ಬರುತ್ತೆ...!*
*ಮನೆಗಳಾಗುತ್ತಿವೆ ಮಹಡಿಗಳಿಂದ ಎತ್ತರ... ಎತ್ತರ... ಮನಸ್ಸುಗಳೇ ಆಗುತ್ತಿಲ್ಲ ಹತ್ತಿರ...ಹತ್ತಿರ...! ಸಂತೋಷ ಏನೆಂಬುದಕ್ಕೆ ಸಿಗುತ್ತಿಲ್ಲ ಉತ್ತರ...!*
*ಅಂದು...ಬಿಸಿಲು, ಮಳೆ, ಚಳಿಗೆ ಮೈ ಒಗ್ಗಿತ್ತು, ಮನೆ ತಣ್ಣಗಿತ್ತು. ಒಲೆ ಹೊಗೆಯಾಡುತ್ತಿತ್ತು. ಬಿಸಿನೀರ ಹಂಡೆ ಹಬೆಯಾಡುತ್ತಿತ್ತು...!*
*ಕಣಜದ ತುಂಬಾ... ದವಸ ಧಾನ್ಯ ತುಂಬಿತ್ತು. ಬಂಧುಬಳಗದ ನಡುವೆ ಅನುಬಂಧವಿತ್ತು*
*ಎಲ್ಲರೊಟ್ಟಿಗೆ ಮನೆಯೂ ನಗೆಯಾಡುತಿತ್ತು...!*
*ಮನೆ ಚಿಕ್ಕದಾದ್ರೂ, ಮನಸು ಚೊಕ್ಕವಾಗಿತ್ತು...!*
*ಅಂದು ನನ್ನಜ್ಜ ಕಟ್ಟಿದ ಮನೆಯಲ್ಲಿ...ನಲಿವಿತ್ತು, ಒಲವಿತ್ತು, ಸಂತಸದ ಸೆಲೆಯಿತ್ತು...!*
*ಮುಖ್ಯ ಬಾಗಿಲು* *ಚಿಕ್ಕದಿತ್ತು,* *ತಲೆಬಾಗಬೇಕಿತ್ತು*.
*ಮಣ್ಣಿನ ಗೋಡೆ, ಸಾರಿಸಿದ ನೆಲವಿತ್ತು*
*ಮಾಡು ಚಿಕ್ಕದಿತ್ತು, ಬದುಕು ದೊಡ್ಡದಿತ್ತು. ನೋವುಗಳಿದ್ದರೂ ಬದುಕಿಗೆ ಬೆಲೆಯಿತ್ತು.ಚಾಪೆಯಲಿ ಕಣ್ಣಿಗೆ ಚೆಂದದ ನಿದ್ರೆಯಿತ್ತು...!*
*ಅಂದು ಆಸ್ಪತ್ರೆಯ ಹಂಗೇ ಇರಲಿಲ್ಲ. ಎಲ್ಲ ಸಮಸ್ಯೆಗಳಿಗೂ ಮನೆಯಲ್ಲೇ ಮದ್ದಿತ್ತು.ಮಗುವೂ ಕೂಡ ಮನೆಯಲ್ಲೇ ಹುಟ್ಟುತ್ತಿತ್ತು.*
*ಮದುವೆ ಕೂಡ ಮನೆಯಲ್ಲೇ ನೆಡೆಯುತ್ತಿತ್ತು...ಚಿತ್ರ ವಿಚಿತ್ರದ ಛತ್ರವೇ ಬೇಕಿರಲಿಲ್ಲ...!*
*ಕೆಲಸಕ್ಕೆ ಶ್ರದ್ಧೆ, ದೇವರ ಮೇಲೆ ನಂಬಿಕೆಯಿತ್ತು...!*
*ಸಾವಿಗೂ ಸಹ ಮನೆಯೇ ಸಾಕ್ಷಿ ಯಾಗುತ್ತಿತ್ತು...!*👍
*ಹಲವು ಮಕ್ಕಳು ಹುಟ್ಟಿದ ಸಂತಸವಿತ್ತು.ಅವರ ಬಾಲ್ಯದ, ಬದುಕಿನ ಸಂಭ್ರಮವಿತ್ತು....!*
*ನೆಂಟರು ಬಂದರೆ, ಹಬ್ಬದ ಸಡಗರವಿತ್ತು.😃*
*ಕೆಲವು ಸಾವುಗಳ ಸೂತಕವೂ ಇತ್ತು.😭ಸತ್ತ ಹಿರಿಯರ ನೆನಪು ಅಚ್ಚಳಿಯದೇ ಉಳಿದಿತ್ತು...!* 🙏🙏
*ಕಷ್ಟಗಳ ಗೆದ್ದ ಗೆಲುವಿನ ದ್ಯೋತಕ ವೂ ಇತ್ತು...! ಬದುಕಿನ ಸಾಧಕ ಭಾದಕ ಗಳೆಲ್ಲವೂ ಇತ್ತು...!*
*ಇಂದು...? ಮನೆ ರಾಜನಿಲ್ಲದ ಅರಮನೆಯಂತೆ, ಸಕಲ ಸವಲತ್ತು ಗಳಿರುವ ದರ್ಬಾರಿನಂತೆ,ನೆರೆ ಮನೆಯ ಹಂಗಿಲ್ಲದ ಸೆರೆಮನೆ ಯಂತೆ. ಆದ್ರೂ ಮನೆಮಂದಿಗೆಲ್ಲ ಬಹಳ ದುಡ್ಡಿನದೇ ಚಿಂತೆ ಚಿಂತೆ..!*
*ಬೇಕಾಗಿದ್ದದ್ದಕ್ಕಿಂತ, ಬೇಕೆನಿಸಿದ್ದೇ ತುಂಬಿದೆ, ದೊಡ್ಡದಿದೆ, ಶ್ರೀಮಂತವಾಗಿದೆ, ಸಜ್ಜಾಗಿದೆ. ಮನಸುಗಳು ಮಾತ್ರ ನಜ್ಜು ಗುಜ್ಜಾಗಿವೆ...!*
*ಶುಭ ಕಾರ್ಯಗಳು, 😃ಸಂತೋಷ ಕೂಟಗಳು,😃 ಮನೆಬಿಟ್ಟು, ಹೋಟೆಲ್ಲುಗಳ ಸೇರಿಕೊಂಡಿವೆ. ಬಂಧುತ್ವ🤝 ಮಿತೃತ್ವಗಳು ಬಂಧನದಲ್ಲಿವೆ...!*
*ನೆಂಟರಿಷ್ಟರು ಮನೆಗೆ ಬಂದರೆ, ಬರೀ ನಕ್ಕೂ ನಗದೇ... ಮೊಬೈಲ್ ನೊಂದಿಗೆ ಕೋಣೆ ಸೇರಿಕೊಳ್ಳುತ್ತಿದ್ದಾರೆ ಮನೆ ಮಕ್ಕಳು.*
*ಸ್ನೇಹ,ಸಂಬಂಧಗಳಲ್ಲೂ ತೋರಿಕೆ, ತಾತ್ಸಾರ, ನಂಬಿಕೆ ಒಗ್ಗಟ್ಟುಗಳಂತೂ ಬಹಳವೇ ದೂರ...!*
🙏🔆 *ಮತ್ತೆ ಬರಲಿ ಆ ತುಂಬು ಕುಟುಂಬದ ಕಾಲ. ಆಗಲಿ ಮನೆ ಮನಗಳೂ ನಂದಗೋಕುಲ...!*
🙏 *ಅರ್ಥವಾಗಲಿ ಸರ್ವರಿಗೂ ಸಂಬಂಧದ ಬೆಲೆ...! ಕಲಿಯಲಿ ಎಲ್ಲರು ಸಂತಸದಿ, ಒಟ್ಟಾಗಿ ನಗುವ ಕಲೆ...!*
*ಆಗಲಿ ದ್ವೇಷ ಸ್ವಾರ್ಥ ಮತ್ಸರಗಳಿಗೆ ಸೋಲು. ಶ್ರೀಮಂತಿಕೆಗಿಂತ ಹೃದಯ ವಂತಿಕೆ ಮೇಲು...!* 🙏
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ